ರಾಹುಲ್ ಗಾಂಧಿಯ ಪ್ರಕಾರ ಇವರು ಬಿಜೆಪಿಯ ಅತ್ಯಂತ ಪ್ರಾಮಾಣಿಕ ವ್ಯಕ್ತಿ

Update: 2019-10-21 09:06 GMT

ಹೊಸದಿಲ್ಲಿ, ಅ.21: ಮತದಾರರು ಯಾವ ಬಟನ್ ಒತ್ತಿದರೂ ಬಿಜೆಪಿಗೆ ಮತ ಬೀಳುತ್ತದೆ ಎಂಬ ಬಿಜೆಪಿ ಅಭ್ಯರ್ಥಿಯೊಬ್ಬರ ಹೇಳಿಕೆ ವಿವಾದ ಸೃಷ್ಟಿಸಿರುವ ನಡುವೆ ಈ ಬಗ್ಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಹರ್ಯಾಣದ ಅಸ್ಸಾಂಧ್ ಕ್ಷೇತ್ರದ ಶಾಸಕ ಮತ್ತು ಈ ಬಾರಿಯ ಬಿಜೆಪಿ ಅಭ್ಯರ್ಥಿಯಾಗಿರುವ ಬಕ್ಷೀಶ್ ಸಿಂಗ್ ವಿರ್ಕ್ ಮತದಾರರನ್ನುದ್ದೇಶಿಸಿ ಮಾತನಾಡುತ್ತಾ, "ನೀವು  ಯಾವ ಬಟನ್ ಒತ್ತಿದರೂ ಬಿಜೆಪಿಗೆ ಮತ ಬೀಳುತ್ತದೆ" ಎಂದಿದ್ದರು.

ಈ ಬಗ್ಗೆ ಟ್ವೀಟ್ ಮಾಡಿ ಬಕ್ಷೀಶ್ ರ ವಿಡಿಯೋ ಶೇರ್ ಮಾಡಿರುವ ರಾಹುಲ್ ಗಾಂಧಿ, "ಇವರು ಬಿಜೆಪಿ ಅತ್ಯಂತ ಪ್ರಾಮಾಣಿಕ ವ್ಯಕ್ತಿ" ಎಂದು ಹೇಳಿದ್ದಾರೆ.

ವಿವಾದಾತ್ಮಕ ಹೇಳಿಕೆಗಾಗಿ ಚುನಾವಣಾ ಆಯೋಗವು ಬಕ್ಷೀಶ್ ವಿರುದ್ಧ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News