ಕಳವು ಆರೋಪಿ ಬಂಧನ: 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

Update: 2019-10-21 12:51 GMT

ಬೆಂಗಳೂರು, ಅ.21: ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಚಿನ್ನಾಭರಣ ಕಳವು ಮಾಡುತ್ತಿದ್ದ ಆರೋಪದಡಿ ಓರ್ವನನ್ನು ಬಂಧಿಸಿರುವ ಬಾಗಲಗುಂಟೆ ಠಾಣಾ ಪೊಲೀಸರು 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

ಹುರುಳಿ ಚಿಕ್ಕನಹಳ್ಳಿಯ ಮಂಜೇಶ್(36) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಐಷಾರಾಮಿ ಜೀವನಕ್ಕಾಗಿ ಕಳವು ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದ ಮಂಜೇಶ್ ಈಗಾಗಲೇ 100ಕ್ಕೂ ಹೆಚ್ಚು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಒಂಟಿಯಾಗಿರುವ ಮಹಿಳೆಯರನ್ನು ಗುರಿಯಾಗಿಸಿಕೊಂಡು ಉಚಿತವಾಗಿ ರೇಷನ್ ಕಾರ್ಡ್, ವೃದ್ಧಾಪ್ಯ ವೇತನ ಕೊಡಿಸುವುದಾಗಿ ನಂಬಿಸಿ, ಅವರ ಮನೆಯಲ್ಲಿ ಚಿನ್ನಾಭರಣ, ನಗದು ಕಳವು ಮಾಡುತ್ತಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

ಸೆ.14 ರಂದು ಮಲ್ಲಸಂದ್ರದ ಪೈಪ್ ಲೇನ್ ಚನ್ನಮ್ಮ (72) ಎಂಬುವರ ಚಿನ್ನಾಭರಣವನ್ನು ಕಳವು ಮಾಡಿ ಪರಾರಿಯಾಗಿದ್ದ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬಾಗಲಗುಂಟೆ ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News