ಅ.​24ರಿಂದ ಭಾರೀ ಮಳೆ ಸಾಧ್ಯತೆ: ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್ ಘೋಷಣೆ

Update: 2019-10-21 15:05 GMT
ಸಾಂದರ್ಭಿಕ ಚಿತ್ರ

ಉಡುಪಿ, ಅ.21: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಅ.24ರಿಂದ ಮುಂದಿನ ಮೂರು ದಿನಗಳ ಕಾಲ ಬಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದು, ಇದರಂತೆ ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್ ಘೋಷಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗೃತ ಕ್ರಮ ವಹಿಸುವ ಸಲುವಾಗಿ ಈ ಕೆಳಗಿನ ಸೂಚನೆಗಳನ್ನು ನೀಡಿದೆ.
ಸಾರ್ವಜನಿಕರು/ ಮೀನುಗಾರರು / ನದಿ ತೀರ / ಸಮುದ್ರಕ್ಕೆ ಇಳಿಯದಂತೆ ಎಚ್ಚರ ವಹಿಸಬೇಕು. ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರಬೇಕು. ತಗ್ಗು ಪ್ರದೇಶ/ ಕೆರೆ/ ನದಿ ತೀರ/ ಸಮುದ್ರ ತೀರದ ಪ್ರದೇಶಗಳಿಗೆ ಮಕ್ಕಳು ಹೋಗದಂತೆ ಪಾಲಕರು ಜಾಗೃತೆ ವಹಿಸುವಂತೆ ಹಾಗೂ ತುರ್ತು ಸೇವೆಗೆ ಟೋಲ್ ಫ್ರೀ ನಂ: 1077, ದೂರವಾಣಿ ಸಂಖ್ಯೆ: 0820-2574802/2574360ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರೀ ಮಳೆ: ಇಂದು ಬೆಳಗ್ಗೆ 8:30ಕ್ಕೆ ಮುಕ್ತಾಯಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 61.59ಮಿ.ಮೀ. ಮಳೆ ಯಾಗಿದೆ. ಉಡುಪಿಯಲ್ಲಿ 80.2ಮಿ.ಮೀ., ಕಾರ್ಕಳದಲ್ಲಿ 65.57ಮಿ.ಮೀ. ಹಾಗೂ ಕುಂದಾಪುರದಲ್ಲಿ 39 ಮಿ.ಮೀ. ಮಳೆ ಸುರಿದ ಬಗ್ಗೆ ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News