ಮೊಬೈಲ್ ಲೌಡ್ ಸ್ಪೀಕರ್ ಬಳಕೆ ನಿಷೇಧ ವಿಚಾರ: ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

Update: 2019-10-21 18:16 GMT

ಬೆಂಗಳೂರು, ಅ.21: ಕೆಎಸ್ಸಾರ್ಟಿಸಿ, ಬಿಎಂಟಿಸಿ ಹಾಗೂ ರೈಲುಗಳಲ್ಲಿ ಮೊಬೈಲ್ ಲೌಡ್ ಸ್ಪೀಕರ್ ಬಳಕೆಯನ್ನು ನಿರ್ಬಂಧಿಸಲು ನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಇಲ್ಲಿಯವರೆಗೆ ಕೈಕೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಲು ಹಾಗೂ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿದೆ.

ಈ ಕುರಿತು ವಕೀಲ ರಮೇಶ್‌ನಾಯಕ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ರೈಲು, ಬಿಎಂಟಿಸಿ, ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಪ್ರಯಾಣಿಕರು ತಮ್ಮ ಮೊಬೈಲ್‌ಗಳಲ್ಲಿ ಲೌಡ್ ಸ್ಪೀಕರ್ ಬಳಸಿ ಹಾಡು ಅಥವಾ ಇನ್ಯಾವುದೇ ಕಾರ್ಯಕ್ರಮಗಳನ್ನು ಕೇಳುವಂತಿಲ್ಲ. ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಮೊಬೈಲ್ ಮೂಲಕ ಜೋರಾಗಿ ಹಾಡುಗಳನ್ನು ಹಾಕುವುದು ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1986ರ ನಿಯಮ 94(i)(v)ರ ಉಲ್ಲಂಘನೆಯಾಗಿರುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಒಂದು ತಿಂಗಳಲ್ಲಿ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News