ಅನರ್ಹ ಶಾಸಕರ ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ

Update: 2019-10-22 06:11 GMT

ಹೊಸದಿಲ್ಲಿ, ಅ.22: ಕರ್ನಾಟಕದ 17 ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರಕ್ಕೆ ಮುಂದೂಡಿದೆ.

ಮಂಗಳವಾರ ಬೆಳಗ್ಗೆ ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್ ಪರ ಹಿರಿಯ ವಕೀಲ ಕಪಿಲ್ ಸಿಬಾಲ್ ಅವರು ಚುನಾವಣೆ ನೀತಿ ಸಂಹಿತೆಗೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇದೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎನ್.ವಿ.ರಮಣ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದರು.

ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಒಟ್ಟು 17 ಶಾಸಕರು ತಮ್ಮ ವಿರುದ್ಧದ ಅನರ್ಹತೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News