ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

Update: 2019-10-22 13:43 GMT

ಉಡುಪಿ, ಅ.22: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು.

ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳನ್ನು ಅ.24ರಂದು ಬೆಳಗ್ಗೆ 11ರಿಂದ 12:30ರವರೆಗೆ ಕಾರ್ಕಳ ಪ್ರವಾಸಿ ಮಂದಿರ, ಅ.25ರಂದು ಬೆಳಗ್ಗೆ 11ರಿಂದ 12:30ರವರೆಗೆ ಕುಂದಾಪುರ ಪ್ರವಾಸಿ ಮಂದಿರ ಹಾಗೂ ಅ.30ರಂದು ಬೆಳಗ್ಗೆ 11ರಿಂದ 12:30ರವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ಸ್ವೀಕರಿಸಲಾಗುವುದು.

ಉಡುಪಿ ತಾಲೂಕಿಗೆ ಸಂಬಂದಪಟ್ಟ ದೂರು ಅರ್ಜಿಗಳನ್ನು ನೀಡುವವರು ನೇರವಾಗಿ ಕರ್ನಾಟಕ ಲೋಕಾಯುಕ್ತ ಉಡುಪಿ ಕಚೇರಿಯನ್ನು ಸಂಪರ್ಕಿಸ ಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಉಡುಪಿ (ದೂರವಾಣಿ:0820-2527770), ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಉಡುಪಿ (0820-2536661) ಇವರನ್ನು ಸಂಪರ್ಕಿಸುವಂತೆ ಉಡುಪಿ ವಿಭಾಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News