ನಗರ ಪುನರ್ವಸತಿ ಕಾರ್ಯಕರ್ತ ಹುದ್ದೆಗೆ ಅರ್ಜಿ ಆಹ್ವಾನ

Update: 2019-10-22 14:06 GMT

ಮಂಗಳೂರು, ಅ.22: ವಿಕಲಚೇತನರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ನಗರ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪುತ್ತೂರು ನಗರಸಭೆ, ಕೋಟೆಕಾರ್ ಪಪಂ, ಉಳ್ಳಾಲ ನಗರಸಭೆ, ಬಂಟ್ವಾಳ ಪುರಸಭೆ, ಮುಲ್ಕಿ, ಬೆಳ್ತಂಗಡಿ ಪಪಂ, ಮೂಡುಬಿದಿರೆ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರ ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ, ಉದ್ಯೋಗ, ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಕಲ್ಪಿಸುವ ದೃಷ್ಟಿಯಿಂದ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಅರ್ಜಿ ಸಲ್ಲಿಸಲು ನ.22 ಕೊನೆಯ ದಿನವಾಗಿದೆ. ಅರ್ಜಿ ನಮೂನೆಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್, ಮಂಗಳೂರು-575006 ಈ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಳಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ ದೂ.ಸಂ.: 0824-2458173, 2455999ನ್ನು ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಯಮುನಾ ಡಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News