ಬೌರಿಂಗ್ ಇನ್ಸ್‌ಟಿಟ್ಯೂಟ್‌ಗೆ 14 ಕೋಟಿ ರೂ.ದಂಡ: ಸಚಿವ ಆರ್.ಅಶೋಕ್

Update: 2019-10-22 17:17 GMT

ಬೆಂಗಳೂರು, ಅ.22: ನಗರದ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿರುವ ಬೌರಿಂಗ್ ಇನ್ಸ್‌ಟಿಟ್ಯೂಟ್ ಕ್ಲಬ್‌ನವರು ಮನರಂಜನೆ ಕೇಂದ್ರ ಸ್ಥಾಪನೆ ಮಾಡಲು ಪಡೆದಿದ್ದ ಜಾಗದಲ್ಲಿ ಪೆಟ್ರೋಲ್ ಬಂಕ್ ತೆರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ 14 ಕೋಟಿ ರೂ.ದಂಡ ವಿಧಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೌರಿಂಗ್ ಇನ್ಸ್‌ಟಿಟ್ಯೂಟ್‌ನವರು ತಮಗೆ ಅಗತ್ಯವಿಲ್ಲದಿದ್ದರೂ ಜಾಗವನ್ನು ಪಡೆದು 150x100 ವಿಸ್ತೀರ್ಣದ ಜಾಗದಲ್ಲಿ ಪೆಟ್ರೋಲ್ ಬಂಕ್ ತೆರೆಯಲು ಅವಕಾಶ ಕಲ್ಪಿಸಿದ್ದಾರೆ. ಆ ಜಾಗವನ್ನು ಸರಕಾರದ ವಶಕ್ಕೆ ಪಡೆದು ಬಿಬಿಎಂಪಿಗೆ ಹಸ್ತಾಂತರಿಸಿ, ಸಾರ್ವಜನಿಕ ಉಪಯೋಗಕ್ಕೆ ಬಳಸಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News