ಸಬ್‌ರಿಜಿಸ್ಟ್ರಾರ್ ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪ: ಪೊಲೀಸರಿಗೆ ದೂರು ನೀಡಿದ ಮಹಾ ನಿರೀಕ್ಷಕ

Update: 2019-10-22 18:33 GMT

ಬೆಂಗಳೂರು, ಅ.22: ರಾಜ್ಯದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬಂದಿದೆ ಎನ್ನಲಾಗಿದ್ದು, ಈ ಸಂಬಂಧ ನೋಂದಣಿ ವಿಭಾಗದ ಮಹಾ ನಿರೀಕ್ಷಕ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಈ ಹಿಂದಿನ ಸರಕಾರದ ಅವಧಿಯಲ್ಲಿ ಆರ್.ವಿ ದೇಶಪಾಂಡೆ ಕಂದಾಯ ಸಚಿವರಾಗಿದ್ದರು. ಈ ಸಂದರ್ಭದಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಯ ಕೆಲ ಸಿಬ್ಬಂದಿ ನಕಲಿ ದಾಖಲೆ ಸೃಷ್ಟಿಸಿ, ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಆನ್‌ಲೈನ್ ಮೂಲಕ ನೋಂದಣಿ ಮಾಡಿದ್ದಾರೆ. ಈ ಹಗರಣದಿಂದ ಸರಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಇಲಾಖೆಯ ಕೆಲವು ದಾಖಲಾತಿಗಳನ್ನು ಮಾರ್ಪಾಡು ಮಾಡಿ ಕೆಲವರ ಖಾತೆಗಳಲ್ಲಿ ಬದಲಾವಣೆ ಮಾಡಿದ್ದಾರೆ. ಎಷ್ಟು ದಾಖಲಾತಿಗಳು ಬದಲಾವಣೆ ಆಗಿದೆ ಎಂಬುವುದರ ಬಗ್ಗೆ ತನಿಖೆ ನಡೆಸಬೇಕು. ಸದ್ಯ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News