ತೌಹೀದ್ ಶಾಲೆ: ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Update: 2019-10-23 05:46 GMT

ಬಂಟ್ವಾಳ, ಅ.23: ಬಂಟ್ವಾಳದ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಸೋಮವಾರ ಜರುಗಿತು.

ಬಂಟ್ವಾಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್‌ ಸ್ಪರ್ಧೆಯನ್ನು ಉದ್ಘಾಟಿಸಿ, ಪರಿಶೀಲನೆ ಹಾಗೂ ಪ್ರಶ್ನಿಸುವ ಮೂಲಕ ವೈಜ್ಞಾನಿಕ ಮನೋಭಾವನೆ ಮೂಡಿಸಬೇಕೆಂಬ ಸಂದೇಶವನ್ನು ನೀಡಿದರು.

ತೌಹೀದ್ ಶಾಲಾ ಕಾರ್ಯದರ್ಶಿ ಬಿ.ಅಬ್ದುಲ್ ಖಾದರ್, ಆಡಳಿತ ಮಂಡಳಿಯ ಸದಸ್ಯ ಬಿ.ಎ.ಮುಹಮ್ಮದ್, ರಿಯಾಝ್ ಹುಸೈನ್, ಶಬೀರ್ ಅಹ್ಮದ್, ಮುಹಮ್ಮದ್ ಇಸ್ಮಾಯೀಲ್, ಪಿಟಿಎ ಅಧ್ಯಕ್ಷ ಮುಹಮ್ಮದ್ ಹನೀಫ್ ಉಪಸ್ಥಿತರಿದ್ದರು.

ತೌಹೀದ್ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಮೆಟಿಲ್ಡಾ ಡಿಕೋಸ್ತಾ ಸ್ವಾಗತಿಸಿದರು. ಬಂಟ್ವಾಳ ತಾಲೂಕಿನ ಕ್ಷೇತ್ರ ಸಂಯೋಜಕಿ ಸುಶೀಲಾ ವಂದಿಸಿದರು. ತೌಹೀದ್ ಶಾಲಾ ಶಿಕ್ಷಕಿ ಮೀನಾ ಕಾರ್ಯಕ್ರಮ ನಿರೂಪಿಸಿದರು.

ಒಟ್ಟು 6 ವಿಭಾಗಳಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ನಡೆಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ತಮ್ಮ ವೈಜ್ಞಾನಿಕ ದೃಷ್ಟಿಕೋನದ ಮೂಲಕ ತಮ್ಮ ಅಪರಿಮಿತ ಪ್ರತಿಭೆಯನ್ನು ಅನಾವರಣಗೊಳಿಸಿದರು. ವಿಜೇತ ಮಕ್ಕಳಿಗೆ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News