ಬಿವಿಟಿ: ಉಚಿತ ವಸ್ತ್ರವಿನ್ಯಾಸ ತರಬೇತಿಗೆ ಅರ್ಜಿ

Update: 2019-10-23 14:07 GMT

ಮಣಿಪಾಲ, ಅ.23: ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟಿನಲ್ಲಿ ನವೆಂಬರ್ 4ರಿಂದ 4 ವಾರಗಳ ಉಚಿತ ವಸ್ತ್ರ ವಿನ್ಯಾಸ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಸ್ವಉದ್ಯೋಗ ಮಾಡಲು ಆಸಕ್ತಿ ಇರುವ ಮಹಿಳೆಯರು ಹಾಗೂ ಶಾಲಾ ಕಾಲೇಜು ಕಲಿಯುತ್ತಿರುವ/ವಿದ್ಯಾಭ್ಯಾಸ ಮುಗಿಸಿರುವ ಮಹಿಳಾ ಅಭ್ಯರ್ಥಿಗಳು ಈ ತರಬೇತಿಯ ಸದುಪಯೋಗವನ್ನು ಪಡೆದು ಕೊಳ್ಳಬಹುದು.\

ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ, ಉಪಹಾರ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಮತ್ತು ವಿದ್ಯಾರ್ಹತೆಯನ್ನು ಬಿಳಿ ಹಾಳೆಯಲ್ಲಿ ಬರೆದು ಅ.30ರೊಳಗೆ ಭಾರತೀಯ ವಿಕಾಸ ಟ್ರಸ್ಟ್, ‘ಅನಂತ’, ಪೆರಂಪಳ್ಳಿ, ಅಂಬಾಗಿಲು ರಸ್ತೆ, ಕುಂಜಿಬೆಟ್ಟು ಅಂಚೆ ಉಡುಪಿ- 576102 ಈ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿಕೊಡಬಹುದು.

ಹೆಚ್ಚಿನ ಮಾಹಿತಿಗಳಿಗಾಗಿ ದೂರವಾಣಿ: 0820-2570263 (ಕಚೇರಿ) ಅಥವಾ ಮೊಬೈಲು:7349315969ನ್ನು ಸಂಪರ್ಕಿಸಬಹುದು. ಈಗಾಗಲೇ ಹೆಸರು ನೊಂದಾಯಿಸಿಕೊಂಡವರು ದೂರವಾಣಿ ಮೂಲಕ ತಮ್ಮ ಭಾಗವಹಿ ಸುವಿಕೆಯನ್ನು ದೃಢೀಕರಿಸಬೇಕು ಎಂದು ಸಂಸ್ಥೆ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News