ಬ್ಯಾಡ್ಮಿಂಟನ್: ರಾಜ್ಯಮಟ್ಟದ ಸ್ಪರ್ಧೆಗೆ ಯಶವಂತ್ ಆಯ್ಕೆ
Update: 2019-10-23 19:43 IST
ಉಡುಪಿ, ಅ.23: ಉಡುಪಿಯ ವಿದ್ಯೋದಯ ಟ್ರಸ್ಟ್‌ನ ಅಂಗಸಂಸ್ಥೆಯಾದ ಶ್ರೀಅನಂತೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಯಶವಂತ್ ಉಡುಪಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಚಾಮರಾಜನಗರದಲ್ಲಿ ನಡೆಸಿದ ಮೈಸೂರು ವಿಭಾಗೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಕೂಟದಲ್ಲಿ ದ್ವಿತೀಯ ಸ್ಥಾನಿಯಾಗುವ ಮೂಲಕ ಯಶವಂತ್ ಈ ಸಾಧನೆ ಮಾಡಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಸಂಧ್ಯಾ ಕಾರ್ನಾಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.