ರಾಷ್ಟ್ರೀಯ ಸೇವಾ ಕಾರ್ಯಕರ್ತರ ತರಬೇತಿ ಶಿಬಿರದ ಸಮಾರೋಪ

Update: 2019-10-23 14:16 GMT

ಉಡುಪಿ, ಅ.23: ನೆಹರು ಯುವ ಕೇಂದ್ರ ಸಂಘಟನೆ ಬೆಂಗಳೂರು ಹಾಗೂ ನೆಹರು ಯುವ ಕೇಂದ್ರ ಉಡುಪಿಯ ಜಂಟಿ ಸಹಯೋಗದಲ್ಲಿ ಹಮ್ಮಿಕೊಳ್ಳ ಲಾದ ರಾಷ್ಟ್ರೀಯ ಸೇವಾ ಕಾರ್ಯಕರ್ತರ 15 ದಿನಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಬುಧವಾರ ಬ್ರಹ್ಮಗಿರಿಯ ನ್ಯಾಶನಲ್ ಇನ್ ಸ್ಟಿಟ್ಯೂಟ್ ಆಫ್ ಎಸ್‌ಎಚ್‌ಜಿ ತರಬೇತಿ ಸಂಸ್ಥೆಯ ಪ್ರಗತಿಸೌಧದಲ್ಲಿ ನಡೆಯಿತು.

ಕಾರ್ಯಕರ್ತರಿಗೆ ಪ್ರಮಾಣಪತ್ರ ವಿತರಿಸಿದ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ಮಾತನಾಡಿ, ದೇಶದ ಭವಿಷ್ಯ ರಚನೆಯಲ್ಲಿ ಯುವಜನತೆಯ ಕೊಡುಗೆ ಬಹಳ ಮುಖ್ಯವಾಗಿದೆ. ದೇಶದ ಮುಂದೆ ಇರುವ ಅನೇಕ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಯುವ ಸಮುದಾಯ ಚಿಂತನೆ ಮಾಡಬೇಕಾಗಿದೆ ಎಂದರು.

ಶಿಬಿರದಲ್ಲಿ ಪಡೆದುಕೊಂಡ ಅನುಭವವನ್ನು ತಮ್ಮ ತಮ್ಮ ಊರುಗಳಲ್ಲಿ ಅನು ಷ್ಠಾನಗೊಳಿಸುವ ಕೆಲಸ ಮಾಡಬೇಕು. ಕೇವಲ ಬ್ರೇಕಿಂಗ್ ನ್ಯೂಸ್‌ಗಳನ್ನು ಮಾತ್ರ ನೋಡದೆ ಪತ್ರಿಕೆಗಳಲ್ಲಿನ ಗಂಭೀರ ಸುದ್ದಿಗಳನ್ನು ಓದಿ ದೇಶದ ಸಮಸ್ಯೆಗಳ ಬಗ್ಗೆ ಅರಿತುಕೊಳ್ಳಬೇಕು. ಮುಂದೆ ಅದಕ್ಕೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಯೋಚನೆ ಮಾಡಬೇಕು ಎಂದು ಅವರು ಅಭಿಪ್ರಾಯ ಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಮಾತನಾಡಿ, ಯುವ ಶಕ್ತಿಯೇ ಈ ದೇಶ ನಿಜವಾದ ರಾಷ್ಟ್ರ ಶಕ್ತಿ. ಯುವ ಸಮುದಾಯವೇ ಭವ್ಯ ಭಾರತದ ಭವಿಷ್ಯದ ರೂವಾರಿಗಳಾಗಿದ್ದಾರೆ. ನಮ್ಮಲ್ಲಿನ ಯುವಶಕ್ತಿ ಸರಿಯಾಗಿ ಸದುಪಯೋಗ ಆಗಬೇಕು. ತಳಮಟ್ಟದಿಂದ ಎತ್ತರಕ್ಕೆ ಬೆಳೆಯಲು ಶ್ರಮ ವಹಿಸ ಬೇಕು. ಸಮಯಪ್ರಜ್ಞೆ, ಮಿತ್ರತ್ವವನ್ನು ಬೆಳೆಸಿಕೊಳ್ಳಬೇಕು. ಸಮಯಕ್ಕೆ ಹೆಚ್ಚಿನ ಮಹತ್ವ ನೀಡಿ ಸರಿಯಾಗಿ ವಿನಿಯೋಗಿಸಿಕೊಳ್ಳಬೇಕು ಎಂದು ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕರಾವಳಿ ಪ್ರಾದೇಶಿಕ ನಿರ್ದೇಶಕ ಮಹಾವೀರ್ ಅರ್ಜಿ, ಉಡುಪಿ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್‌ಕುಮಾರ್ ಶೆಟ್ಟಿ, ಎಸ್‌ಎಚ್‌ಜಿ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಅಶೆಕ್ ಕೆ. ಮುಖ್ಯ ಅತಿಥಿಗಳಾಗಿದ್ದರು.

ಈ ಶಿಬಿರದಲ್ಲಿ ಪಾಲ್ಗೊಂಡ ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಮಂಗಳೂರು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳ ಕಾರ್ಯಕರ್ತರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಉಡುಪಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಂಯೋಜಕ ವಿಲ್ಫ್ರೆಡ್ ಡಿಸೋಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೇಂದ್ರದ ಕಾರ್ಯಕರ್ತ ಸುನೀಲ್ ಸ್ವಾಗತಿಸಿದರು. ಶ್ರೇಯಸ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ ದರು.ಶಿಬಿರದಲ್ಲಿ ಒಟ್ಟು 108 ಮಂದಿಯು ಕಾರ್ಯಕರ್ತರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News