×
Ad

ಕನ್ನಡದಲ್ಲಿ ನಾಮಫಲಕ ಕಡ್ಡಾಯಕ್ಕೆ ಕಲ್ಕೂರ ಆಗ್ರಹ

Update: 2019-10-23 22:15 IST

ಮಂಗಳೂರು, ಅ.23: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೊಳಪಟ್ಟ ಎಲ್ಲ ವಾಣಿಜ್ಯ ಮಳಿಗೆ, ವಸತಿ ಸಂಕೀರ್ಣ ವಾಣಿಜ್ಯ ಸಂಕೀರ್ಣ, ಸಂಘ, ಸಂಸ್ಥೆಗಳಲ್ಲೂ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲೇ ಪ್ರದರ್ಶಿಸಲು ಆದೇಶ ಹೊರಡಿಸುವಂತೆ ಆಗ್ರಹಿಸಿ ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್‌ ಕುಮಾರ್ ಕಲ್ಕೂರ ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಅವರಿಗೆ ಮನವಿ ಸಲ್ಲಿಸಿದರು.

ಈಗಾಗಲೇ ಬೆಂಗಳೂರು ಮಹಾನಗರ ಪಾಲಿಕೆಯು ನ.1ರೊಳಗೆ ಕನ್ನಡದಲ್ಲೇ ನಾಮಫಲಕಗಳನ್ನು ಪ್ರದರ್ಶಿಸುವ ಕುರಿತು ಆದೇಶ ನೀಡಿದ್ದು, ಇದು ರಾಜ್ಯದಾದ್ಯಂತ ಜಾರಿಗೆ ಬರಬೇಕು. ಮಂಗಳೂರು ರಾಜ್ಯದ ಪ್ರಮುಖ ನಗರಗಳಲ್ಲೊಂದಾಗಿದೆ. ಈ ಕುರಿತು ದಿಟ್ಟ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News