ಕನ್ನಡ ರಾಜ್ಯೋತ್ಸವ: ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ನೆರವೇರಿಸಲು ಸಚಿವರ ನೇಮಕ

Update: 2019-10-23 16:48 GMT

ಬೆಂಗಳೂರು, ಅ.23: ನವೆಂಬರ್ 1ರಂದು ಆಚರಿಸುವ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಸಚಿವರು ಹಾಗೂ ಜಿಲ್ಲಾಧಿಕಾರಿಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ ಎಂದು ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಪ್ರಕಟಿಸಿದ್ದಾರೆ.

ಬೆಂಗಳೂರು ನಗರ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಾಗಲಕೋಟೆ- ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಮನಗರ-ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥನಾರಾಯಣ್, ಬಳ್ಳಾರಿ-ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ.

ಶಿವಮೊಗ್ಗ-ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಬೆಂಗಳೂರು ಗ್ರಾಮಾಂತರ-ಕಂದಾಯ ಸಚಿವ ಆರ್.ಅಶೋಕ್, ಬೆಳಗಾವಿ-ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ರಾಯಚೂರು-ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು.

ಚಾಮರಾಜನಗರ-ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಮೈಸೂರು-ವಸತಿ ಸಚಿವ ವಿ.ಸೋಮಣ್ಣ, ಚಿಕ್ಕಮಗಳೂರು-ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ, ಉಡುಪಿ-ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮಂಗಳೂರು-ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ.

ತುಮಕೂರು-ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಗದಗ-ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್, ಕೋಲಾರ-ಅಬಕಾರಿ ಸಚಿವ ಎಚ್.ನಾಗೇಶ್, ಬೀದರ್-ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್, ಉತ್ತರ ಕನ್ನಡ-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ.

ಕಲಬುರಗಿ, ಚಿಕ್ಕಬಳ್ಳಾಪುರ, ಕೊಪ್ಪಳ, ದಾವಣಗೆರೆ, ಮಂಡ್ಯ, ಹುಬ್ಬಳ್ಳಿ-ಧಾರವಾಡ, ಚಿತ್ರದುರ್ಗ, ಕೊಡಗು, ಹಾವೇರಿ, ಹಾಸನ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ರಾಜ್ಯ ಶಿಷ್ಟಾಚಾರ)ಯ ಸರಕಾರದ ಅಧೀನ ಕಾರ್ಯದರ್ಶಿ ಕೆ.ಎನ್.ಪ್ರವೀಣ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News