ನೇತ್ರಾವತಿ ನದಿಗೆ ಬಿದ್ದು ನಾಪತ್ತೆಯಾಗಿದ್ದ ಕಾರ್ಮಿಕನ ಮೃತದೇಹ ಪತ್ತೆ
Update: 2019-10-23 22:25 IST
ಬಂಟ್ವಾಳ, ಅ. 23: ಅ. 21ರಂದು ಪುದು ಗ್ರಾಮದ ಸುಜೀರಿನಲ್ಲಿ ನಾಡದೋಣಿಯ ಮೂಲಕ ನೇತ್ರಾವತಿ ನದಿಯಿಂದ ಮರಳು ತೆಗೆಯುವಾಗ ಆಕಸ್ಮಿಕವಾಗಿ ನದಿಗೆ ಬಿದ್ದು ನಾಪತ್ತೆಯಾಗಿದ್ದ ಕಾರ್ಮಿಕನ ಮೃತದೇಹ ಬುಧವಾರ ಮೃತದೇಹ ಸುಜೀರು ಪ್ರದೇಶದ ನದಿಯಲ್ಲಿ ಪತ್ತೆಯಾಗಿದೆ.
ಎರಡು ದಿನಗಳ ಹುಟುಕಾಟದ ಬಳಿಕ ಬುಧವಾರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರಪ್ರದೇಶದ ಬಾಯತ್ಪುರ ನಿವಾಸಿ, ಕಾರ್ಮಿಕ ಕಮಲೇಶ್ ಕುಮಾರ್ ತಮ್ಮ ತಂಡದ ಜೊತೆ ಮರಳು ತೆಗೆಯುವ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ನದಿಗೆ ಬಿದ್ದಿದ್ದರು. ಅ. 22ರಂದು ಮುಳುಗುಪಟುಗಳು ದಿನವಿಡೀ ಹುಡುಕಾಟ ನಡೆಸಿದರೂ ಮೃತದೇಹ ಪತ್ತೆಯಾಗಿರಲಿಲ್ಲ.
ಬುಧವಾರ ಕಾರ್ಮಿಕನ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕಾರ್ಮಿಕನ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.