​ಮಂಗಳೂರು: 11 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2019-10-23 17:15 GMT

ಮಂಗಳೂರು, ಅ.23: ಅಬಕಾರಿ ಕಾಯ್ದೆ ಉಲ್ಲಂಘನೆ ಪ್ರಕರಣದಲ್ಲಿ ಭಾಗಿಯಾಗಿ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಕೇರಳ ಕಾಂಞಂಗಾಡ್‌ನ ಶಶಿಧರ್ ಬಂಧಿತ ಆರೋಪಿ.

ಈತ 2008ರಲ್ಲಿ ಅಬಕಾರಿ ಕಾಯ್ದೆ ಉಲ್ಲಂಘನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತನ ವಿರುದ್ಧ ಕಾವೂರು ಪೊಲೀಸ್ ಠಾಣಯಲ್ಲಿ ಪ್ರಕರಣ ದಾಖಲಾಗಿತ್ತು. ಈತನ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಪೊಲೀಸರು ಕೇರಳದಲ್ಲಿ ಆರೋಪಿಯನ್ನು ಬಂಧಿಸಿ, ಮಂಗಳೂರಿಗೆ ಕರೆ ತಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News