ಕೆಎಸ್‌ಆರ್‌ಟಿಸಿಯಲ್ಲಿ ಟಿಕೆಟ್ ರಹಿತ ಪ್ರಯಾಣ: 6,82 ಲಕ್ಷ ರೂ. ದಂಡ ವಸೂಲಿ

Update: 2019-10-23 17:30 GMT

ಬೆಂಗಳೂರು ಅ.23: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸೆಪ್ಟಂಬರ್-2019ರಲ್ಲಿ ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 45,884 ವಾಹನಗಳನ್ನು ತನಿಖೆಗೊಳಪಡಿಸಿ 4,732 ಪ್ರಕರಣಗಳನ್ನು ಪತ್ತೆಹಚ್ಚಿದೆ.

ಇದರಲ್ಲಿ 5,858 ಟಿಕೆಟ್ ರಹಿತ ಪ್ರಯಾಣಿಕರಿಂದ 6,82,598 ರೂ. ದಂಡದ ರೂಪದಲ್ಲಿ ವಸೂಲಿ ಮಾಡಿದೆ. ಮತ್ತು ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 97,118 ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ತಪ್ಪಿತಸ್ಥರ ವಿರುದ್ಧ ಇಲಾಖಾ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗಿದೆ.

ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ ಸಂಸ್ಥೆಯು ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News