ಆರ್ ಸಿಇಪಿ ಒಪ್ಪಂದ ವಿರೋಧಿಸಿ ಅ.24ಕ್ಕೆ ದನಗಳ ಜೊತೆ ಪ್ರತಿಭಟನೆ: ಬಡಗಲಪುರ ನಾಗೇಂದ್ರ

Update: 2019-10-23 17:51 GMT

ಮೈಸೂರು, ಅ.23: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್.ಸಿ.ಇ.ಪಿ) ಒಪ್ಪಂದ ಒಪ್ಪಂದ ವಿರೋಧಿಸಿ ಅ.24ರ ಗುರುವಾರ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಹೋರಾಟ ನಡೆಸಲಾಗುತ್ತಿದ್ದು. ನಗರದಲ್ಲಿ ರಾಮಸ್ವಾಮಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲಾಕೇಂದ್ರಗಳಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ದನಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಅಂದು ಬೆಳಗ್ಗೆ 10.30 ಗಂಟೆಗೆ ರಾಮಸ್ವಾಮಿ ವೃತ್ತದಿಂದ ದನಗಳ ಜೊತೆಯಲ್ಲಿ ಪ್ರತಿಭಟನಾ ಮೆರವಣಿಗೆ ಹೊರಟು ಜಿಲ್ಲಾಧಿಕಾರಿಗಳ ಕಚೇರಿ ತಲುಪಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲೆಯ ಹಾಲು ಉತ್ಪಾದಕರು, ರೈತರು, ಪ್ರಗತಿಪರರಾದ ದೇವನೂರು ಮಹಾದೇವ, ಪ.ಮಲ್ಲೇಶ್. ಚಂದ್ರಶೇಖರ್ ಸೇರಿದಂತೆ ಹಲವು ಸಂಘಟನೆಗಳು ಭಾಗಿಯಾಗಲಿವೆ ಎಂದರು.

ಪತ್ರಿಕಾಘೋಷ್ಠಿಯಲ್ಲಿ ಜನಾಂದೋಲ ಮಹಾಮೈತ್ರಿಯ ಎಸ್.ಆರ್.ಹಿರೇಮಠ್, ಹಿರಿಯ ಸಾಹಿತಿ ದೇವನೂರು ಮಹಾದೇವ, ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೆಟಿ, ಹೊಸಕೋಟೆ ಬಸವರಾಜು, ಅಭಿರುಚಿ ಗಣೇಶ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News