×
Ad

ಮೈಸೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಾವು

Update: 2019-10-23 23:32 IST
ಸಾಂದರ್ಭಿಕ ಚಿತ್ರ

ಮೈಸೂರು,ಅ.23: ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬರು ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತ ಕೈದಿಯನ್ನು ಉತ್ತರ ಪ್ರದೇಶ ಮೂಲದ ರಾಮರಾಜ್ ಅಲಿಯಾಸ್ ರಾಮನಾರಾಯಣ (45) ಎಂದು ಹೇಳಲಾಗಿದೆ. ರಾಮರಾಜ್‍ಗೆ ಸೋಮವಾರ ಕಾರಾಗೃಹದಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತದೇಹವನ್ನು ಕೆ.ಆರ್.ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮೃತರ ಸಂಬಂಧಿಕರು ಯಾರಾದರು ಇದ್ದಲ್ಲಿ ಮಂಡಿ ಪೊಲೀಸರನ್ನು ಸಂಪರ್ಕಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News