ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ: ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್

Update: 2019-10-24 09:03 GMT

ಮಂಗಳೂರು, ಅ.3: ಅರಬಿ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪ್ರಭಾವದಿಂದ ಕೇರಳ, ಕರ್ನಾಟಕ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ನೆಚ್ಚರಿಕೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರವು ರೆಡ್ ಅಲರ್ಟ್ ಸೂಚನೆ ನೀಡಿದೆ. ಸಾರ್ವಜನಿಕರು ಈ ಅವಧಿಯಲ್ಲಿ ಮುಂಜಾಗ್ರತಾ ಕ್ರಮ ವಹಿಸುವಂತೆ ಹಾಗೂ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.

ಹವಾಮಾನ ಇಲಾಖೆ ಸೂಚನೆ ನೀಡಿರುವಂತೆ ಕರಾವಳಿಯಲ್ಲಿ ಹಿಂಗಾರು ಮಳೆ ಗುರುವಾರ ಮತ್ತಷ್ಟು ಬಿರುಸುಗೊಂಡಿದೆ. ಬೆಳಗ್ಗೆಯಿಂದಲೇ ದ.ಕ., ಕಾಸರಗೋಡು ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ.

ಗಾಳಿಮಳೆಗೆ ಸಿಲುಕಿ ಮಂಜೇಶ್ವರ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಕೇಂದ್ರವಾಗಿರುವ ಕಾಸರಗೋಡಿನ ಪೈವಳಿಕೆಯ ನಗರ ಶಾಲೆಯಲ್ಲಿ ಹಾಕಲಾಗಿದ್ದ ಚಪ್ಪರ ಕುಸಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News