ನಳಿನ್ ಕುಮಾರ್ ಗೆ ಇನ್ನೂ ರಾಜಕೀಯ ಪ್ರಬುದ್ಧತೆ ಬೆಳೆದಿಲ್ಲ: ಸಿದ್ದರಾಮಯ್ಯ
Update: 2019-10-24 17:31 IST
ಬೆಂಗಳೂರು, ಅ. 24: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಬಾಲಿಶ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಆತನಿಗೆ ಇನ್ನೂ ರಾಜಕೀಯ ಪ್ರಬುದ್ಧತೆ ಬೆಳೆದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದರು.
ಗುರುವಾರ ವಿಧಾನಸೌಧದಲ್ಲಿನ ತನ್ನ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ನಮ್ಮ ಪಕ್ಷದ ಮುಖಂಡ. ದಿಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು ಬಿಡುಗಡೆಗೊಂಡಿದ್ದಾರೆ. ಅವರಿಗೆ ಯಾವ ಸ್ಥಾನ ನೀಡಬೇಕೆಂದು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದರು.