ಕುಣಿಗಲ್: ಕಾರು- ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ; ಐವರು ಸ್ಥಳದಲ್ಲೇ ಸಾವು
Update: 2019-10-24 22:12 IST
ತುಮಕೂರು,ಅ.24: ಜಲ್ಲಿ ತುಂಬಿದ್ದ ಟ್ರ್ಯಾಕ್ಟರ್ ಗೆ ಹಿಂದಿನಿಂದ ಕಾರೊಂದು ರಭಸವಾಗಿ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ತೀವ್ರ ಗಾಯಗೊಂಡಿರುವ ಘಟನೆ ಗುರುವಾರ ಸಂಜೆ ಕುಣಿಗಲ್ ತಾಲೂಕು ಅಮೃತೂರು ಹೋಬಳಿ ಹೊಸಕೆರೆ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಕಾರು ಚಾಲಕ ಕಿರಣ್(28) ರಾಜಣ್ಣ(50) ಮೋಹನ್ (22) ಮಧು(24) ನತ್ತಯ ರಂಗಸ್ವಾಮಿ (55) ಎಂದು ಗುರುತಿಸಲಾಗಿದೆ. ಹೊಸಕೆರೆ ಸಮೀಪದ ದೊಡ್ಡ ಕಲ್ಲಹಳ್ಳಿಯಲ್ಲಿ ಹಬ್ಬ ಮುಗಿಸಿ ವಾಪಸಾಗುವ ಸಂದರ್ಭದಲ್ಲಿ ರಸ್ತೆ ಬದಿ ಜಲ್ಲಿ ತುಂಬಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಗೆ ಮಾರುತಿ ಸ್ವಿಪ್ಟ್ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ. ಮೃತರು ಬೆಂಗಳೂರು ಮೂಲದವರು ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಕುಣಿಗಲ್ ತಾಲೂಕಿನ ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.