ಕೇರಳ: ದುಷ್ಕರ್ಮಿಗಳ ತಂಡದಿಂದ ಮುಸ್ಲಿಂ ಲೀಗ್ ಕಾರ್ಯಕರ್ತನ ಹತ್ಯೆ

Update: 2019-10-24 17:26 GMT

ಮಲಪ್ಪುರಂ, ಅ.24: ಇಲ್ಲಿನ ತನೂರ್ ಸಮೀಪದ ಅಂಚೂಡಿ ಎಂಬಲ್ಲಿ ಮುಸ್ಲಿಂ ಲೀಗ್ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳ ತಂಡ ಹತ್ಯೆಗೈದಿರುವ ಘಟನೆ ನಡೆದಿದೆ. ಮೃತರನ್ನು ಅಂಚುಡಿ ನಿವಾಸಿ ಇಸಾಕ್ (36) ಎಂದು ಗುರುತಿಸಲಾಗಿದೆ.

ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಸ್ಥಳೀಯ ಮಸೀದಿಯೊಂದಕ್ಕೆ ಇಸಾಕ್ ತೆರಳುತ್ತಿದ್ದ ವೇಳೆ ತಂಡವೊಂದು ಅವರ ಮೇಲೆ ದಾಳಿ ನಡೆಸಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿಪಿಎಂ ಕಾರ್ಯಕರ್ತರು ಇಸಾಕ್ ರನ್ನು ಹತ್ಯೆಗೈದಿದ್ದಾರೆ ಎಂದು ಮುಸ್ಲಿಂ ಲೀಗ್ ಆರೋಪಿಸಿದೆ. ಇದು ಪೂರ್ವನಿಯೋಜಿತ ಕೃತ್ಯವಾಗಿದ್ದು, ಸ್ಥಳದಲ್ಲಿ ಗಸ್ತಿನಲ್ಲಿದ್ದ ಪೊಲೀಸರ ತಂಡವೂ ಕೃತ್ಯವನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಆರೋಪಿಸಲಾಗಿದೆ. ಕೆಲ ತಿಂಗಳುಗಳಿಂದ ಈ ಪ್ರದೇಶದಲ್ಲಿ ಸಿಪಿಎಂ ಮತ್ತು ಮುಸ್ಲಿಂ ಲೀಗ್ ಕಾರ್ಯಕರ್ತರ ನಡುವೆ ಜಗಳಗಳು ನಡೆಯುತ್ತಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News