ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜು ಕ್ರೀಡೋತ್ಸವಕ್ಕೆ ಚಾಲನೆ
ಕೊಣಾಜೆ: ದೈಹಿಕ ಚಟುವಟಿಕೆ ಆರೋಗ್ಯಕರ ಜೀವನಕ್ಕೆ ಅತೀ ಮುಖ್ಯ ಹಾಗೂ ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಭವಿಷ್ಯ ಜೀವನ ಉತ್ತಮವಾಗಿರುತ್ತದೆ ಎಂದು ಕಣಚೂರು ವಿದ್ಯಾಸಂಸ್ಥೆಯ ಕರೆಸ್ಪಾಂಡೆಂಟ್ ಅಬ್ದುಲ್ ರಹೆಮಾನ್ ಅಭಿಪ್ರಾಯಪಟ್ಟರು.
ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಣಚೂರು ಮ್ಯಾನೇಜ್ ಮೆಂಟ್ ಆ್ಯಂಡ್ ಸೈನ್ಸ್ ನ ಪ್ರಾಂಶುಪಾಲ ಇಕ್ಬಾಲ್ ಅಹಮದ್ ಯು.ಟಿ. ಮತ್ತು ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಹೇಮಲತಾ ಉಪಸ್ಥಿತರಿದ್ದರು. ಈ ಕ್ರೀಡೋತ್ಸವದಲ್ಲಿ ಹಗ್ಗ-ಜಗ್ಗಾಟ ಕಬ್ಬಡಿ, ಗುಂಡೆಸೆತ, 100, 400, 800 ಮೀಟರ್ ಓಟ ಹಾಗೂ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರ ನಡುವೆ ಹಗ್ಗ-ಜಗ್ಗಾಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.
ದೈಹಿಕ ಶಿಕ್ಷಕಿ ಗೀತಾ ಸಂದೀಪ್ ಕ್ರೀಡೋತ್ಸವ ಕಾರ್ಯಕ್ರಮವನ್ನು ನಿರ್ವಹಿಸಿದರು. ಗಣಕ ವಿಜ್ಞಾನದ ಉಪನ್ಯಾಸಕಿ ಗೀತಾ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.