ಕೇಂದ್ರದ ಆರ್ಥಿಕ ನೀತಿ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ

Update: 2019-10-24 18:03 GMT

 ಹೊಸದಿಲ್ಲಿ, ಅ.24: ಕೇಂದ್ರದ ನರೇಂದ್ರ ಮೋದಿ ಸರಕಾರದ ಆರ್ಥಿಕ ನೀತಿಯನ್ನು ವಿರೋಧಿಸಿ ದೇಶದ ಎಲ್ಲಾ ರಾಜ್ಯ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ನವೆಂಬರ್ 5ರಿಂದ 15ರವರೆಗೆ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

ಕೇಂದ್ರ ಸರಕಾರದ ಆರ್ಥಿಕ ನೀತಿಯನ್ನು ವಿರೋಧಿಸಿ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಮೋದಿ ನೇತೃತ್ವದ ಕೇಂದ್ರ ಸರಕಾರದ ಅವಧಿಯಲ್ಲಿ ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಿದ್ದು ಈ ಅಂಶವನ್ನು ದೇಶದ ಜನತೆಯ ಮುಂದಿಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಅಕ್ಟೋಬರ್‌ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇದನ್ನು ನವೆಂಬರ್‌ಗೆ ಮುಂದೂಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News