ಅನರ್ಹ ಶಾಸಕರ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

Update: 2019-10-25 10:02 GMT

ಹೊಸದಿಲ್ಲಿ, ಅ.25: ಶಾಸಕರ ಅನರ್ಹ ಪ್ರಕರಣಕ್ಕೆ ಸಂಬಂಧಿಸಿ ಪರ-ವಿರೋಧ ವಾದವನ್ನು ಆಲಿಸಿದ ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠ ತನ್ನ ತೀರ್ಪನ್ನ ಕಾಯ್ದಿರಿಸಿದೆ. ಶಾಸಕರ ಅನರ್ಹತೆ ಪ್ರಕರಣದ ತೀರ್ಪು ದೀಪಾವಳಿಯ ಬಳಿಕ ಪ್ರಕಟವಾಗುವ ಸಾಧ್ಯತೆಯಿದೆ.

 ಅನರ್ಹ ಶಾಸಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು. ಅವರಿಗೆ ಅವಕಾಶ ನೀಡಿದರೆ ಅನರ್ಹತೆಗೆ ಅರ್ಥವೇ ಬರುವುದಿಲ್ಲ. ಸದನದ ಒಳಗಿನ ತೀರ್ಮಾನಗಳಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸಬಾರು. ಈ ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕ ವರ್ಗಾಯಿಸಬೇಕೆಂದು ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಾಲ್ ವಾದ ಮಂಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News