×
Ad

ವಿಜ್ಞಾನ ತಂತ್ರಜ್ಞಾನದಲ್ಲಿ ರಾಜ್ಯ ಮುಂಚೂಣಿಯಲ್ಲಿ: ಡಾ. ಅಶ್ವಥ್ ನಾರಾಯಣ್

Update: 2019-10-25 19:59 IST

ಉಡುಪಿ, ಅ.25:ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ಜಾಗತಿಕವಾಗಿ ಹೆಸರು ಮಾಡಿದ್ದು, ದೇಶದಲ್ಲಿ ಮುಂಚೂಣಿಯಲ್ಲಿದೆ. ಇವುಗಳಲ್ಲಿ ರಾಜ್ಯದಲ್ಲಿ ರುವ ಅತ್ಯುನ್ನತ ಮಟ್ಟದ ಶಿಕ್ಷಣ ಸಂಸ್ಥೆಗಳೇ ಕಾರಣ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ, ಐಟಿ,ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಮಣಿಪಾಲದ ಮಾಹೆ ಹಾಗೂ ಕರ್ನಾಟಕ ಸರಕಾರದ ಜಂಟಿ ಆಶ್ರಯದಲ್ಲಿ ಮಣಿಪಾಲದಲ್ಲಿ ಸ್ಥಾಪಿಸಲಾದ ಮಣಿಪಾಲ-ಕರ್ನಾಟಕ ಸರಕಾರ ಬಯೋ ಇನ್‌ಕ್ಯೂಬೇಟರ್ ಕೇಂದ್ರವನ್ನು ಉದ್ಘಾಟಿಸಿ ಹೊಟೇಲ್ ವ್ಯಾಲಿವ್ಯೆನಲ್ಲಿ ನಡೆದ ಸಭಾ ಕಾರ್ಯಕ್ರವುದಲ್ಲಿ ಅವರು ಮಾತನಾಡುತಿದ್ದರು.

ಹೊಸ ಆವಿಷ್ಕಾರಗಳಲ್ಲಿ ಕರ್ನಾಟಕ ದೇಶದಲ್ಲೇ ಅಗ್ರಸ್ಥಾನದಲ್ಲಿದೆ. ವಿಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಏರೋಸ್ಪೇಸ್, ರಕ್ಷಣಾ ತಂತ್ರಜ್ಞಾನ, ಸ್ಟಾರ್ಟ್‌ಅಪ್‌ಗಳಲ್ಲೂ ರಾಜ್ಯ ವಿಶೇಷ ಸಾಧನೆ ಮಾಡಿದೆ. ಈ ಸಾಧನೆಯನ್ನು ಮುಂದುವರಿಸಿಕೊಂಡು ಹೋಗಲು ಮತ್ತು ಸುಸ್ಥಿರ ಅಭಿವೃದ್ಧಿ ಸಾಧಿಸಲು ಇಂಥ ಕೇಂದ್ರಗಳು ಹಾಗೂ ಶಿಕ್ಷಣ ಸಂಸ್ಥೆಗಳು ಪ್ರಮುಖ ಪಾತ್ರ ಹಿಸುತ್ತವೆ ಎಂದವರು ಹೇಳಿದರು.

ಹೊಸ ಆವಿಷ್ಕಾರಗಳಲ್ಲಿ ಕರ್ನಾಟಕ ದೇಶದಲ್ಲೇ ಅಗ್ರಸ್ಥಾನದಲ್ಲಿದೆ. ವಿಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಏರೋಸ್ಪೇಸ್, ರಕ್ಷಣಾ ತಂತ್ರಜ್ಞಾನ, ಸ್ಟಾರ್ಟ್‌ಅಪ್‌ಗಳಲ್ಲೂ ರಾಜ್ಯ ವಿಶೇಷ ಸಾನೆಮಾಡಿದೆ.ಈಸಾನೆಯನ್ನು ಮುಂದುವರಿಸಿಕೊಂಡು ಹೋಗಲು ಮತ್ತು ಸುಸ್ಥಿರ ಅಭಿವೃದ್ಧಿ ಸಾಧಿಸಲು ಇಂಥ ಕೇಂದ್ರಗಳು ಹಾಗೂ ಶಿಕ್ಷಣ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದವರು ಹೇಳಿದರು.

ವಿಶ್ವದಾದ್ಯಂತ ಎಲ್ಲ ದೇಶಗಳು ಹೊಸ ಸಂಶೋಧನೆ, ನೂತನ ಆವಿಷ್ಕಾರಗಳಿಗೆ ಒತ್ತು ನೀಡುತ್ತಿವೆ. ನಮ್ಮ ಯುವಜನರು, ಉದ್ದಿಮೆದಾರರು ಅವಕಾಶ ವಂಚಿತ ರಾಗದಂತೆ, ಜಾಗತಿಕ ಸ್ಪರ್ಧೆಯಲ್ಲಿ ಹಿಂದೆ ಬೀಳಬಾರದೆಂಬ ಕಾರಣಕ್ಕಾಗಿ ಬೆಂಬಲವಾಗಿ ಎಲ್ಲಾ ಸೌಲಭ್ಯಗಳಿರುವ ಇನ್‌ಕ್ಯೂಬೇಟರ್ ಕೇಂದ್ರಗಳನ್ನು ತೆರೆಯಲಾಗುತ್ತಿದೆ ಎಂದು ಡಾ. ಅಶ್ವಥ್ ನಾರಾಯಣ್ ನುಡಿದರು.

ಮಣಿಪಾಲ ಸಂಸ್ಥೆ ಈಗಾಗಲೇ ಹಲವು ಸ್ಟಾರ್ಟ್‌ಅಪ್‌ಗಳನ್ನು ಹೊಂದಿವೆ. ಮಾಹಿತಿ ತಂತ್ರಜ್ಞಾನದ ಕ್ಷೇತ್ರದಲ್ಲಿ ಹೊಸ ಸ್ಟಾರ್ಟ್‌ಅಪ್‌ ಗಳಿವೆ. ಜೈವಿಕ ತಂತ್ರಜ್ಞಾನದಲ್ಲಿ ಬಯೋಮೆಡಿಕಲ್ ಮತ್ತು ಬಯೋ ಫಾರ್ಮಾ ಕ್ಷೇತ್ರಗಳ ಉತ್ತೇಜನಕ್ಕಾಗಿ ಮಣಿಪಾಲದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ ಎಂದರು.

ಕರ್ನಾಟಕ ಐಟಿ-ಬಿಟಿ ಸಂಸ್ಥೆಯ ನಿರ್ದೇಶಕ ಹಾಗೂ ಕೆಐಟಿಎಸ್‌ನ ಆಡಳಿತ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ ಮಾತನಾಡಿ, 2001ರಲ್ಲಿ ರಾಜ್ಯ ಜೈವಿಕ ತಂತ್ರಜ್ಞಾನ ನೀತಿಯನ್ನು ಪ್ರಕಟಿಸಿದ್ದು, ಈವರೆಗೆ ಒಟ್ಟು ನಾಲ್ಕು ಇನ್‌ಕ್ಯುಬೇಟರ್ ಕೇಂದ್ರವನ್ನು ಸ್ಥಾಪಿಸಿದ್ದು, ಇದು ಐದನೇ ಕೇಂದ್ರವಾಗಿದೆ. ಉಳಿದ ನಾಲ್ಕು ಕೇಂದ್ರಗಳು ಬೆಂಗಳೂರಿನಲ್ಲೇ ಇದ್ದು, ಪ್ರಾದೇಶಿಕ ಅಸಮತೋಲನ ನಿವಾರಿಸಲು ಇದನ್ನು ಕರಾವಳಿ ಕರ್ನಾಟಕಕ್ಕೆ ನೀಡಲಾಗಿದೆ ಎಂದರು.

ಮಾಹೆ ಕುಲಪತಿ ಡಾ.ಎಚ್.ವಿನೋದ್ ಭಟ್ ಮಾತನಾಡಿ ಮಣಿಪಾಲ ದಲ್ಲಿ ಮುಂದಿನ ಐದು ವರ್ಷದೊಳಗೆ ಫಾರ್ಮಸಿ ಹಬ್‌ನ್ನು ಸ್ಥಾಪಿಸುವ ಉದ್ದೇಶ ವಿದ್ದು, ಇದಕ್ಕೆ ರಾಜ್ಯ ಸರಕಾರದ ಸಹಕಾರವನ್ನು ನಿರೀಕ್ಷಿಸುತ್ತೇವೆ ಎಂದರು. ಮಣಿಪಾಲ ಬಯೋಇನ್‌ಕ್ಯೂಬೇಟರ್ ಸೆಂಟರ್‌ನ ಸಿಇಓ ಡಾ.ಮನೀಷ್ ಥಾಮಸ್, ಕೇಂದ್ರದ ಉದ್ದೇಶವನ್ನು ವಿವರಿಸಿದರು. ಮಾಹೆ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಅವರೂ ಮಾತನಾಡಿದರು.

ಉಡುಪಿ ಶಾಸಕ ಕೆ.ರಘುಪತಿ ಭಟ್, ಬೆಂಗಳೂರು ಎಂಇಎಂಜಿಯ ಅಧ್ಯಕ್ಷ ಡಾ.ರಂಜನ್ ಆರ್.ಪೈ, ರಾಜ್ಯ ಪೊಲೀಸ್ ಐಜಿ ಅರುಣ್ ಚಕ್ರವರ್ತಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಪ್ರೀತಿ ಗೆಹ್ಲೋಟ್, ಜಿಲ್ಲಾ ಎಸ್ಪಿ ನಿಶಾ ಜೇಮ್ಸ್ ಉಪಸ್ಥಿತರಿದ್ದರು. ಮಣಿಪಾಲ ಲೈಫ್ ಸಾಯನ್ಸ್‌ನ ನಿರ್ದೇಶಕ ಡಾ.ಸತ್ಯಮೂರ್ತಿ ಅತಿಥಿಗಳನ್ನು ಸ್ವಾಗತಿಸಿದರೆ, ಡಾ.ಅನಿಲ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News