ಅನರ್ಹ ಶಾಸಕರಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಉಪಮುಖ್ಯಮಂತ್ರಿ ಸವದಿ

Update: 2019-10-25 15:37 GMT

ಬೆಳಗಾವಿ, ಅ. 25: ‘ಅನರ್ಹ ಶಾಸಕರಿಗೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಮೇಲೆ ವಿಶ್ವಾಸವಿಲ್ಲದೆ ರಾಜೀನಾಮೆ ನೀಡಿದ್ದರಿಂದ ಶಾಸಕರು ಅನರ್ಹರಾಗಿದ್ದು, ಅವರೆಲ್ಲರೂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೀಗಾಗಿ ಅನರ್ಹ ಶಾಸಕರ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಇದೀಗ ನಾವು ಅವರ ಬಗ್ಗೆ ಏಕೆ ಚಿಂತೆ ಮಾಡಬೇಕು? ಎಂದು ಪ್ರಶ್ನಿಸಿದ ಲಕ್ಷ್ಮಣ ಸವದಿ, ಅವರ ಬಗ್ಗೆ ಚಿಂತೆ ಮಾಡುವಂತಹ ಅಗತ್ಯ ನಮಗಿಲ್ಲ ಎಂದು ಹೇಳಿದರು.

ಅನರ್ಹ ಶಾಸಕರು ಬಿಜೆಪಿಗೆ ಬರುವ ಕುರಿತು ಎಲ್ಲೂ ಹೇಳಿಲ್ಲ. ಸ್ಪೀಕರ್ ರಮೇಶ್‌ಕುಮಾರ್ ಅನರ್ಹಗೊಳಿಸಿದ್ದಕ್ಕೆ ಕೋರ್ಟ್ ಮೊರೆ ಹೋಗಿದ್ದಾರೆ. ಕಾಂಗ್ರೆಸ್‌ನಿಂದ ಅನ್ಯಾಯವಾಗಿದ್ದಕ್ಕೆ ಕಾನೂನು ಹೋರಾಟ ಮಾಡುತ್ತಿದ್ದಾರೆ. ಅದು ಅವರ ನಡುವಿನ ವ್ಯಾಜ್ಯ ಎಂದು ಲಕ್ಷ್ಮಣ ಸವದಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News