ನಾಳೆ ಬೆಂಗಳೂರಿಗೆ ಡಿ.ಕೆ.ಶಿವಕುಮಾರ್ ಆಗಮನ
Update: 2019-10-25 21:08 IST
ಬೆಂಗಳೂರು, ಅ.25: ಅಕ್ರಮ ಹಣ ಸಾಗಣೆ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ 48 ದಿನಗಳ ಕಾಲ ಹೊಸದಿಲ್ಲಿಯ ತಿಹಾರ್ ಜೈಲಿನಲ್ಲಿದ್ದು, ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಶನಿವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಹೊಸದಿಲ್ಲಿಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 11.50ಕ್ಕೆ ಹೊರಡಲಿರುವ ಡಿ.ಕೆ.ಶಿವಕುಮಾರ್, ಮಧ್ಯಾಹ್ನ 2.30ರ ವೇಳೆಗೆ ಬೆಂಗಳೂರಿನ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಡಿ.ಕೆ.ಶಿವಕುಮಾರ್ ಸ್ವಾಗತಕ್ಕೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.