×
Ad

ಮೂಡುಬಿದಿರೆ: ಎಸ್.ಡಿ.ಪಿ.ಐ ಯಿಂದ ಪ್ರತಿಭಟನೆ

Update: 2019-10-25 23:00 IST

ಮೂಡುಬಿದಿರೆ: ಕೇಂದ್ರ ಮೋಟಾರ್ ವಾಹನ ಕಾಯ್ದೆ ತಿದ್ದುಪಡಿ ರದ್ದುಗೊಳಿಸಿ, ರಾಷ್ಟೀಯ ಮತ್ತು ರಾಜ್ಯ ಹೆದ್ದಾರಿ ರಸ್ತೆ ನಿರ್ಮಾಣ ಮತ್ತು ನಿರ್ವಹಣೆಗೆ ಕಟ್ಟುನಿಟ್ಟಿನ ಕಾಯ್ದೆ ಜಾರಿಗೆ ತರುವಂತೆ ಆಗ್ರಹಿಸಿ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮುಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಇಲ್ಲಿನ ತಾಲೂಕು ಕಚೇರಿ ಎದುರು ಶುಕ್ರವಾರ ಸಂಜೆ ಪ್ರತಿಭಟನೆ ನಡೆಯಿತು.

ಎಸ್.ಡಿ.ಪಿ.ಐ ಜಿಲ್ಲಾ ಸಮಿತಿಯ ಸದಸ್ಯ ಆನಂದ ಮಿತ್ತಬೈಲು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ಈ ದೇಶದ ಆಡಳಿತದ ಚುಕ್ಕಾಣಿ ಹಿಡಿದ ರಾಜಕೀಯ ಮುತ್ಸದ್ಧಿಗಳನ್ನು ವೈಚಾರಿಕ ನಿಲುವು ಹಾಗೂ ಪ್ರಜಾಪ್ರಭುತ್ವ ಚಿಂತನೆಯ ನಾಯಕರೆಂದು ಹೇಳಲು ಸಾಧ್ಯವಿಲ್ಲ. ವಿಕೃತಿಯಿಂದ ಸಂತೋಷ ಪಡುತ್ತಿರುವ ಈ ನಾಯಕರ ಆಡಳಿತ ಅನಾಚಾರಯುತವಾದದ್ದು ಎಂದು ಆರೋಪಿಸಿದರು.

ಎಸ್.ಡಿ.ಟಿ.ಯು ಇದರ ಜಿಲ್ಲಾಧ್ಯಕ್ಷ ಜಾಬಿರ್ ಅರಿಯಡ್ಕ ಈ ಸಂದರ್ಭದಲ್ಲಿ ಮಾತನಾಡಿದರು. ಪ್ರತಿಭಟನೆಯ ಬಳಿಕ ತಮ್ಮ ಮನವಿಯನ್ನು ಮೂಡುಬಿದಿರೆ ತಹಶೀಲ್ದಾರ್ ಅನಿತಾ ಲಕ್ಷ್ಮೀ ಅವರ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಮುಲ್ಕಿ- ಮೂಡುಬಿದಿರೆ ಕ್ಷೇತ್ರದ ಅಧ್ಯಕ್ಷ ಆಸಿಫ್ ಕೋಟೆಬಾಗಿಲು, ಕಾರ್ಯದರ್ಶಿ ನಿಸಾರ್ ಮರವೂರು, ಇಮ್ರಾನ್ ಮೂಡಬಿದಿರೆ ಹಾಗೂ ಪಕ್ಷದ ಕಾರ್ಯಕರ್ತರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News