×
Ad

ಆಳ್ವಾಸ್‍ಗೆ ವಿಟಿಯು ನಗದು ಪುರಸ್ಕಾರ

Update: 2019-10-25 23:01 IST

ಮೂಡುಬಿದಿರೆ: 2017-2018, 2018-2019 ಸಾಲಿನಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ರಂಗದಲ್ಲಿ ಮಾಡಿದ ಸಾಧನೆಗಾಗಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ನಗದು ಪುರಸ್ಕಾರ ನೀಡಿ ಗೌರವಿಸಿದೆ.  

ವಿಶ್ವವಿದ್ಯಾಲಯ ಮಟ್ಟ, ದಕ್ಷಿಣ ವಲಯ, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದಲ್ಲಿ ಆಳ್ವಾಸ್ ಮಾಡಿದ ಸಾಧನೆಯನ್ನು ಪರಿಗಣಿಸಿ ಒಂದು ಲಕ್ಷ ರೂಪಾಯಿ ನಗದು ಪುರಸ್ಕಾರ ನೀಡಿದೆ.

ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್ ಪುರಸ್ಕಾರ ಸ್ವೀಕರಿಸಿದರು. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು 2013-14 ಸಾಲಿನಲ್ಲೂ ವಿಟಿಯು ನಗದು ಗೌರವ ಪುರಸ್ಕಾರವನ್ನು ಪಡೆದಿತ್ತು. ಕಾಲೇಜಿನ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಅಭಿನಂದಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News