×
Ad

ನ.12ರಂದು ಗ್ರಾಪಂ ಖಾಲಿ ಸ್ಥಾನಗಳಿಗೆ ಉಪಚುನಾವಣೆ

Update: 2019-10-25 23:05 IST

ಮಂಗಳೂರು, ಅ.25: ವಿವಿಧ ಕಾರಣಗಳಿಂದ ತೆರವಾಗಿರುವ ದ.ಕ. ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‌ಗಳ ಖಾಲಿ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ.

ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾಪಂನ ದರೆಗುಡ್ಡೆ-2, ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಪಂನ ಮೂಡನಡುಗೋಡು-2, ಪುತ್ತೂರು ತಾಲೂಕಿನ ಬಜತ್ತೂರು ಗ್ರಾಪಂನ ಬಜತ್ತೂರು-2 ಮತ್ತು ಮರ್ಧಾಳ ಗ್ರಾಪಂನ ನೆಕ್ಕಿಲಾಡಿ-2, ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಗ್ರಾಪಂನ ಹತ್ಯಡ್ಕ-2, ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಪಂನ ಕಲ್ಮಡ್ಕ-2 ಮತ್ತು ಬಳ್ಪ ಗ್ರಾಮ ಪಂಚಾಯತ್‌ನ ಕೇನ್ಯ-1 ಗ್ರಾಪಂ ಕ್ಷೇತ್ರಗಳಿಗೆ ಉಪ ಚುನಾವಣೆ ಚುನಾವಣೆ ನಡೆಯಲಿದೆ.

ಚುನಾವಣೆ ನಡೆಯುವ ಗ್ರಾಪಂಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆಯು ನ.14ರವರೆಗೆ ಜಾರಿಯಲ್ಲಿರುತ್ತದೆ. ಚುನಾವಣೆ ಅಧಿಸೂಚನೆ ಅ.28ರಂದು ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಅ.31 ಕೊನೆಯ ದಿನ. ನ.2ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂದೆಗೆದುಕೊಳ್ಳಲು ನ.4 ಕೊನೆಯ ದಿನವಾಗಿದೆ. ನ.12ರಂದು ಬೆಳಗ್ಗೆ 7ರಿಂದ ಸಂಜೆ 5ಗಂಟೆವರೆಗೆ ಮತದಾನ ನಡೆಯಲಿದೆ. ನ.14ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News