×
Ad

ಬಾಚಕೆರೆ ದೇವಸ್ಥಾನದ ಕಾಣಿಕೆ ಡಬ್ಬಿಯಿಂದ ಕಳವು

Update: 2019-10-25 23:13 IST

ಬಂಟ್ವಾಳ, ಅ. 25: ತಾಲೂಕಿನ ಸರಪಾಡಿ ಸಮೀಪದ ಬಾಚಕೆರೆ ಶ್ರೀದುರ್ಗಾ ಪರಮೇಶ್ವರೀ ದೇವಸ್ಥಾನದ ಕಾಣಿಕೆ ಡಬ್ಬಿಯಿಂದ ನಗದನ್ನು ದೋಚಿರುವ ಘಟನೆ ನಡೆದಿದ್ದು, ಕಾಣಿಕೆ ಡಬ್ಬಿ ಮುರಿದು ನಗದು ದೋಚುವವರೆಗಿನ ಕೃತ್ಯ ದೇವಳದ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.

ಗುರುವಾರ ಮಧ್ಯರಾತ್ರಿ ಸುಮಾರು 12 ಗಂಟೆಯ ವೇಳೆಗೆ ದೇವಸ್ಥಾನದ ಗೇಟ್ ಹಾರಿ ತಾನು ತಂದಿದ್ದ ಕತ್ತಿಯಿಂದ ಕಾಣಿಕೆ ಡಬ್ಬಿಯ ಬೀಗವನ್ನು ಮುರಿದು ಅದರಲ್ಲಿದ್ದ ನಗದು ಹಣವನ್ನು ದೋಚಿದ್ದಾನೆ ಎಂದು ದೂರಲಾಗಿದೆ. ಆರೋಪಿಯ ಗುರುತು ಪತ್ತೆ ಹಚ್ಚಲಾಗಿದ್ದು, ಘಟನೆಯ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ಸ್ಥಳೀಯರು ದೂರು ನೀಡಿದ್ದಾರೆನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News