×
Ad

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 60 ಬಾಂಗ್ಲಾ ವಲಸಿಗರ ಬಂಧನ

Update: 2019-10-26 17:44 IST

ಬೆಂಗಳೂರು, ಅ.26: ವೀಸಾ ಇಲ್ಲದೆ ಕಾನೂನು ಬಾಹಿರವಾಗಿ ನಗರ ವ್ಯಾಪ್ತಿಯಲ್ಲಿ ನೆಲೆಸಿದ್ದ 22 ಮಹಿಳೆಯರು ಸೇರಿ 60 ಜನ ಬಾಂಗ್ಲಾ ದೇಶದ ಪ್ರಜೆಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಪರಾಧ ನಿಯಂತ್ರಣಕ್ಕೆ ಪರಿಣಾಮಕಾರಿಯಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆ ನಗರದ ಮಾರತ್ತಹಳ್ಳಿ, ರಾಮಮೂರ್ತಿ ನಗರ, ಕೆಆರ್ ಪುರ, ಎಚ್‌ಎಎಲ್ ಇನ್ನಿತರ ಕಡೆಗಳಲ್ಲಿ ಅಕ್ರಮವಾಗಿ ನೆಲೆಸಿರುವವರ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿ, ಬಾಂಗ್ಲಾ ದೇಶದ 60 ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಬಂಧಿಸಿರುವ ಬಾಂಗ್ಲಾ ದೇಶದ ಪ್ರಜೆಗಳು ಎಷ್ಟು ವರ್ಷಗಳಿಂದ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ, ಅವರ ವೀಸಾ ಅವಧಿ ಎಷ್ಟು ವರ್ಷ, ಯಾವ ಉದ್ದೇಶಕ್ಕಾಗಿ ಬಂದಿದ್ದರು ಹಾಗೂ ವೀಸಾ ಪಡೆದಿದ್ದರು ಎಂಬುದರ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು. ಬಂಧಿಸಿರುವ ಬಾಂಗ್ಲಾ ದೇಶದ ಪ್ರಜೆಗಳಲ್ಲಿ 29 ಪುರುಷರು, 22 ಮಂದಿ ಮಹಿಳೆಯರು, 9 ಮಂದಿ ಯುವತಿಯರು ಸೇರಿ 60 ಮಂದಿ ಅಕ್ರಮ ವಲಸಿಗರಿದ್ದು, ಅವರನ್ನು ಸ್ವದೇಶಕ್ಕೆ ವಾಪಾಸು ಕಳುಹಿಸುವ ಡಿ ಫೋರ್ಟ್ ಪ್ರಕ್ರಿಯೆ ಮುಂದುವರೆಸಲಾಗಿದೆ ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News