ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ
Update: 2019-10-26 20:13 IST
ಉಡುಪಿ, ಅ.26: ಉಡುಪಿ ಜಿಪಂ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಉಡುಪಿ ಇವರ ವತಿಯಿಂದ, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಉಡುಪಿ ಇವರ ನೇತೃತ್ವದಲ್ಲಿ 2019-20ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ ಅ.30 ಹಾಗೂ 31ರಂದು ಉಡುಪಿ ಅಜ್ಜರಕಾಡು ಮಹಾತ್ಮಗಾಂಧೀ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.
ಪಂದ್ಯಾಟವನ್ನು ರಾಜ್ಯ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಅ.30ರ ಬೆಳಗ್ಗೆ 9 ಗಂಟೆಗೆ ಉದ್ಘಾಟಿಸಲಿದ್ದು, ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.