×
Ad

ಶಿವಮೊಗ್ಗ: ಮನೆ ಗೋಡೆ ಕುಸಿದು ವ್ಯಕ್ತಿ ಸಾವು

Update: 2019-10-26 22:49 IST

ಶಿವಮೊಗ್ಗ, ಅ. 26: ಮನೆಯೊಂದರ ಗೋಡೆ ಕುಸಿದು ವ್ಯಕ್ತಿಯೋರ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಅರಬಿಳಚಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಲಕ್ಷ್ಮಣ್ (70) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಗೋಡೆ ಕುಸಿದಿದೆ. ಇತ್ತೀಚೆಗೆ ಬೀಳುತ್ತಿರುವ ಮಳೆಯಿಂದ ಮನೆಯ ಗೋಡೆ ನೆನೆದು, ಶಿಥಿಲವಾಗಿತ್ತು ಎಂದು ಹೇಳಲಾಗಿದೆ. 

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ್, ಭದ್ರಾವತಿ ತಹಶೀಲ್ದಾರ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News