×
Ad

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಚಿತ್ರಕಲಾ ಶಿಕ್ಷಕನ ಬಂಧನ

Update: 2019-10-26 22:57 IST

ಶಿವಮೊಗ್ಗ, ಅ. 26: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಚಿತ್ರಕಲಾ ಶಿಕ್ಷಕನೋರ್ವನನ್ನು ಜಿಲ್ಲೆಯ ಸಾಗರದ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. 

ಸಾಗರ ತಾಲೂಕಿನ ಗ್ರಾಮದ ವಸತಿ ವಿದ್ಯಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಚಿತ್ರಕಲಾ ಶಿಕ್ಷಕ ಚನ್ನಕೇಶವ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಚಿತ್ರಕಲೆ ಹೇಳಿ ಕೊಡುವ ನೆಪದಲ್ಲಿ, ಕಳೆದ ಸುಮಾರು ಒಂದು ತಿಂಗಳಿನಿಂದ ಬಾಲಕಿಗೆ ಶಿಕ್ಷಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. 

ಈ ಕುರಿತಂತೆ ಶಾಲೆಯ ಆಡಳಿತ ಮಂಡಳಿಯ ಗಮನಕ್ಕೆ ಬಂದರೂ ಆರೋಪಿತ ಶಿಕ್ಷಕನ ವಿರುದ್ಧ ಯಾವುದೇ ಕ್ರಮ ಜರುಗಿಸಲಿರಲಿಲ್ಲ ಎನ್ನಲಾಗಿದ್ದು, ಈ ಕಾರಣದಿಂದ ಬಾಲಕಿಯ ಪೋಷಕರು ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎಫ್‍ಐಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News