×
Ad

ಮಂಡ್ಯ: ವ್ಯಕ್ತಿ ಅನುಮಾನಾಸ್ಪದ ಸಾವು

Update: 2019-10-26 23:59 IST

ಮಂಡ್ಯ, ಅ.26: ಮದ್ದೂರು ತಾಲೂಕಿನ ಬೆಸಗರಹಳ್ಳಿ ಗ್ರಾಮದ ಗೌರಿಪಾಳ್ಯದಲ್ಲಿ ವ್ಯಕ್ತಿಯೊಬ್ಬ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ಗ್ರಾಮದ ರಮೇಶ್(54) ಮೃತ ವ್ಯಕ್ತಿ. ರಮೇಶ್ ಶವ ಅವರ ಮನೆಯ ಮುಂದೆ ಪತ್ತೆಯಾಗಿದೆ. ಇವರು ಲೇವಾದೇವಿ ವ್ಯವಹಾರ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. 

ಮನೆಯ ಹಿಂದಿನ ಸಂದಿಯಿಂದ ಶವವನ್ನು ಎಳೆದುಕೊಂಡು ಬಂದಿರುವ ಗುರುತು ಕಂಡು ಬಂದಿದೆ. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು, ಡಿವೈಎಸ್ಪಿ ಶೈಲೇಂದ್ರಕುಮಾರ್, ಸಿಪಿಐ ಮಹೇಶ್, ಪಿಎಸ್‍ಐ ಆನಂದ್‍ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ಅಕ್ರಮ ಸಂಬಂಧಿವಿತ್ತು ಎಂಬ ಹಿನ್ನೆಲೆಯಲ್ಲಿ ರಮೇಶ್ ಮನೆಯ ಬಳಿಯ ಮಹಿಳೆಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News