ಕಲಬುರಗಿ: ಮನೆಯ ಗೋಡೆ ಕುಸಿದು ಇಬ್ಬರು ಮೃತ್ಯು

Update: 2019-10-27 10:09 GMT

ಕಲಬುರಗಿ, ಅ. 27: ಮನೆಯ ಗೋಡೆ ಕುಸಿದ ಪರಿಣಾಮ ಮಗು ಹಾಗೂ ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ದಿಗಸಂಗಾ ಕೆ. ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಕಾವೇರಿ (20) ಹಾಗೂ ಅವರ ಅಕ್ಕನ ಮಗಳು ವಿದ್ಯಾಶ್ರೀ (5) ಮೃತ ದುರ್ದೈವಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆಯ ಮಣ್ಣಿನ ಗೋಡೆ ಇವರಿಬ್ಬರ ಮೇಲೆ ಬಿದ್ದು ಗಂಭೀರ ಗಾಯಗೊಂಡ ಅವರು ಮೃಪಟ್ಟಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News