×
Ad

ಬಿಜೆಪಿ ಹಿರಿಯ ಕಾರ್ಯಕರ್ತ ಶಂಕರನಾರಾಯಣ ಗುಪ್ತ ನಿಧನ

Update: 2019-10-27 17:19 IST

ಬೆಂಗಳೂರು: ಬಿಜೆಪಿ ಹಿರಿಯ ಕಾರ್ಯಕರ್ತ, ಬೆಂಗಳೂರು ನಗರ ಬಿಜೆಪಿ ಕಾರ್ಯಲಯ ಕಾರ್ಯದರ್ಶಿಯಾಗಿ ದೀರ್ಘಕಾಲ ಕಾರ್ಯ ನಿರ್ವಹಿಸಿದ್ದ  ಕೆ. ಶಂಕರನಾರಾಯಣ ಗುಪ್ತ (90) ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ.

ಜನಸಂಘದ ಕಾಲದಿಂದಲೂ ಪಕ್ಷದ ಸಕ್ರಿಯ ಕಾರ್ಯಕರ್ತರು. ಅವಿವಾಹಿತರಾಗಿದ್ದ ಅವರು ಪಕ್ಷದ ಎಲ್ಲರಿಗೂ ಪ್ರೀತಿಯ" ಗುಪ್ತಾ " ಆಗಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಾಗಿ ನಂತರ ಬಿಜೆಪಿಯ ಪೂರ್ಣಕಾಲೀನ ಕಾರ್ಯಕರ್ತರಾಗಿದ್ದರು.

ಬೆಂಗಳೂರಿನ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ರವಿವಾರ ಬೆಳಗ್ಗೆ ಅಂತಿಮ ಸಂಸ್ಕಾರ ನಡೆಯಿತು. ಬಿಜೆಪಿ ಹಿರಿಯ ಮುಖಂಡರಾದ ರಾಮಚಂದ್ರ ಗೌಡ, ರಾಜ್ಯ ಬಿಜೆಪಿ ಖಜಾಂಚಿ ಸುಬ್ಬಣ್ಣ, ಬೆಂಗಳೂರು ನಗರ ಬಿಜೆಪಿ ಕಾರ್ಯದರ್ಶಿ ಶ್ರೀನಿವಾಸ್ ಹುಚ್ಚಯ್ಯ ಸೇರಿದಂತೆ ಪಕ್ಷದ ಕಾರ್ಯಕರ್ತರು, ಗುಪ್ತಾ ಅವರ ಸಂಬಂಧಿಕರು ಈ ಸಂದರ್ಭ ಹಾಜರಿದ್ದು, ಅಂತಿಮ ನಮನ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News