ಭಿನ್ನಾಭಿಪ್ರಾಯ ಮರೆತು ಚುನಾವಣೆ ಎದುರಿಸುತ್ತೇವೆ: ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ
Update: 2019-10-27 18:01 IST
ಬೆಂಗಳೂರು, ಅ.25: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರೂ ನಮ್ಮ ಪಕ್ಷದ ಜನಪ್ರಿಯ ನಾಯಕರಾಗಿದ್ದು, ಭಿನ್ನಾಭಿಪ್ರಾಯ ಮರೆತು ಚುನಾವಣೆ ಎದುರಿಸಲಿದ್ದೇವೆ ಎಂದು ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಹೇಳಿದರು.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ಭಿನ್ನಾಭಿಪ್ರಾಯಗಳು ಇದ್ದವು. ಈಗ ನಾನು ಭಿನ್ನಾಭಿಪ್ರಾಯಗಳನ್ನು ಮರೆತಿದ್ದೇನೆ. ಸಿದ್ದರಾಮಯ್ಯ ಅವರು ನನಗೆ ಟಿಕೆಟ್ ಕೊಡಲು ಒಪ್ಪಿದ್ದಾರೆ. ನಾವೆಲ್ಲಾ ಮಾತನಾಡಿ ಭಿನ್ನಾಭಿಪ್ರಾಯ ಮರೆತಿದ್ದೇವೆ ಎಂದರು.
ಉಪ ಚುನಾವಣೆಯಲ್ಲಿ ಕಾಂಗ್ರೆಸ್ 10 ಸ್ಥಾನಗಳಲ್ಲಿ ಹಾಗೂ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಈ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ. ಅಲ್ಲದೆ, ಅನರ್ಹ ಶಾಸಕರ ಬಗ್ಗೆ ಈಗಾಗಲೇ ಕ್ಷೇತ್ರದಲ್ಲೂ ವಿರೋಧ ವ್ಯಕ್ತವಾಗಿದೆ ಎಂದು ತಿಳಿಸಿದರು.