×
Ad

ಅರಬ್ಬಿ ಸಮುದ್ರ ಪ್ರಕ್ಷುಬ್ಧ: ಮೀನುಗಾರಿಕೆಗೆ ತೆರಳದಂತೆ ಸೂಚನೆ

Update: 2019-10-27 19:18 IST

ಉಡುಪಿ: ಕ್ಯಾರ್ ಚಂಡಮಾರುತದ ಪರಿಣಾಮ ಅರಬ್ಬಿ ಸಮುದ್ರದಲ್ಲಿ ಮುಂದಿನ 48 ಗಂಟೆಗಳಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡು ಬಲವಾದ ಗಾಳಿ ಬೀಸಲಿದ್ದು, ದೊಡ್ಡ ಅಲೆಗಳು ಉಂಟಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆದ್ದರಿಂದ ಕರ್ನಾಟಕ ಕರಾವಳಿ ತೀರದಲ್ಲಿ ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News