ಶ್ರೀನಗರ: ಬಸ್ ನಿಲ್ದಾಣದ ಮೇಲೆ ಗ್ರೆನೇಡ್ ದಾಳಿ; 15 ಮಂದಿಗೆ ಗಾಯ

Update: 2019-10-28 13:28 GMT

ಜಮ್ಮು ಕಾಶ್ಮೀರ, ಅ.28: ಇಂದು ಇಲ್ಲಿನ ಸೋಪೋರ್ ನಗರದಲ್ಲಿ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ. ಶ್ರೀನಗರದ ಕರಣ್ ನಗರದ ಬಳಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ 2 ದಿನಗಳ ನಂತರ ಈ ಘಟನೆ ನಡೆದಿದೆ.

ಬಸ್ ನಿಲ್ದಾಣದಲ್ಲಿ ಜನರು ಕಾಯುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಒಬ್ಬರನ್ನು ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿ ಯಾರನ್ನೂ ಬಂಧಿಸಲಾಗಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News