ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕುಸಿದು ಬಿದ್ದ ಮಹಿಳಾ ಭದ್ರತಾ ಸಿಬ್ಬಂದಿ

Update: 2019-10-29 10:02 GMT

ಹೊಸದಿಲ್ಲಿ, ಅ.29:  ದೇಶದ ರಾಜಧಾನಿಯಲ್ಲಿ ರಾಷ್ಟ್ರೀಯ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ  ರಾಷ್ಟ್ರಗೀತೆ ಹಾಡುವ ವೇಳೆ  ಮಹಿಳಾ ಭದ್ರತಾ ಸಿಬ್ಬಂದಿಯೊಬ್ಬರು  ಕುಸಿದು ಬಿದ್ದ ಘಟನೆ ನಡೆಯಿತು.

ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ  ರಾಮ್ ನಾಥ್ ಕೋವಿಂದ್ ಅವರೊಂದಿಗೆ ಹಣಕಾಸು ಸಚಿವೆ  ನಿರ್ಮಲಾ ಸೀತಾರಾಮನ್, ಮತ್ತು ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್ ಭಾಗವಹಿಸಿದ್ದರು.

ಬಳಿಕ ರಾಷ್ಟ್ರಪತಿ ಕೋವಿಂದ್  ಅವರು ಬಳಿಕ  ಸಚಿವರೊಂದಿಗೆ  ವೇದಿಕೆಯಿಂದ ಇಳಿದು  ಬಂದು ಮಹಿಳಾ ಭದ್ರತಾ ಸಿಬ್ಬಂದಿಯ ಆರೋಗ್ಯ ವಿಚಾರಿಸಿದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News