ಫಿಲಿಪ್ಪೀನ್ಸ್ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆಯಿಲ್ಲ

Update: 2019-10-29 17:07 GMT

ಮನಿಲಾ (ಫಿಲಿಪ್ಪೀನ್ಸ್), ಅ. 29: ರಿಕ್ಟರ್ ಮಾಪಕದಲ್ಲಿ 6.6ರಷ್ಟಿದ್ದ ಪ್ರಬಲ ಭೂಕಂಪ ದಕ್ಷಿಣ ಫಿಲಿಪ್ಪೀನ್ಸ್‌ನಲ್ಲಿ ಮಂಗಳವಾರ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಕಟ್ಟಡಗಳು ಕಂಪಿಸಿದವು ಹಾಗೂ ಭಯಭೀತ ಜನರು ರಸ್ತೆಗಳಿಗೆ ಓಡಿದರು.

ಮಿಂಡನಾವೊ ದ್ವೀಪದಲ್ಲಿ ಈ ತಿಂಗಳ ಆದಿ ಭಾಗದಲ್ಲಿ ಭೂಕಂಪ ಸಂಭವಿಸಿದ ಪ್ರದೇಶದಲ್ಲೇ ಮಂಗಳವಾರದ ಭೂಕಂಪವೂ ಸಂಭವಿಸಿತು ಎಂದು ಯುಎಸ್ ಜಿಯಾಲಜಿಕಲ್ ಸರ್ವೇ ತಿಳಿಸಿದೆ. ಆದರೆ, ಸುನಾಮಿ ಎಚ್ಚರಿಕೆಯನ್ನು ಹೊರಡಿಸಲಾಗಿಲ್ಲ.

ಸಾವು-ನೋವಿನ ಬಗ್ಗೆ ತಕ್ಷಣಕ್ಕೆ ವರದಿಗಳು ಬಂದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News