×
Ad

ನ್ಯಾ. ಎನ್.ವೆಂಕಟಾಚಲ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

Update: 2019-10-30 11:32 IST

ಬೆಂಗಳೂರು, ಅ.30: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ವೆಂಕಟಾಚಲ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ 

ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ, ಹಂಗಾಮಿ ಮುಖ್ಯ ನ್ಯಾಯಾಧೀಶರಾಗಿ, ಸುಪ್ರೀಂ ಕೋರ್ಟಿನ ನ್ಯಾಯಾಧೀಶರಾಗಿ ಅವರು ಸೇವೆ ಸಲ್ಲಿಸಿದ್ದರು. 2001ರಲ್ಲಿ ಕರ್ನಾಟಕ ಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಅವರು ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಿ, ಈ ವ್ಯವಸ್ಥೆಯ ಕುರಿತು ಜನರಲ್ಲಿ ನಂಬಿಕೆ ಮೂಡಿಸಿದರು ಎಂದು ಮುಖ್ಯಮಂತ್ರಿ ಸ್ಮರಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬಕ್ಕೆ ಈ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸು ವುದಾಗಿ ಮುಖ್ಯಮಂತ್ರಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News