ಕುಪ್ವಾರಾದಲ್ಲಿ ಪಾಕ್ ಸೇನೆಯ ಗುಂಡಿನ ದಾಳಿ; ಓರ್ವ ನಾಗರಿಕ ಸಾವು

Update: 2019-10-30 06:23 GMT

ಶ್ರೀನಗರ, ಅ.30: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನ ಸೇನೆಯು  ಬುಧವಾರ  ನಡೆಸಿದ ಗುಂಡಿನ ದಾಳಿಯಲ್ಲಿ ಸ್ಥಳೀಯ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಐದು ಮಂದಿ ಗಾಯಗೊಂಡಿದ್ದಾರೆ.

 ಕುಪ್ವಾರಾದ ಮಚಿಲ್ ಸೆಕ್ಟರ್‌ನಲ್ಲಿ ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನ ಪಡೆಗಳು ಕದನ ವಿರಾಮವನ್ನು ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರ ರಾತ್ರಿ ಪ್ರಾರಂಭವಾದ ಪಾಕಿಸ್ತಾನದ ಆಕ್ರಮಣಕ್ಕೆ ಭಾರತೀಯ ಸೇನೆಯು ಸೂಕ್ತ ಪ್ರತಿಕ್ರಿಯೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕುಲ್ಗಾಂನಲ್ಲಿ ಮಂಗಳವಾರ ಸಂಜೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮೂಲದ ಐವರು ಕಾರ್ಮಿಕರನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ. ದಾಳಿಯಲ್ಲಿ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.. ಆ ಬಳಿಕ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು,  ಹೆಚ್ಚುವರಿ ಪಡೆಗಳನ್ನು ಕರೆಸಲಾಗಿದೆ ಎಂದು  ಜಮ್ಮು ಮತ್ತು ಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್  ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News