×
Ad

ನ.13: ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಸಂಶೋಧನ ಕೇಂದ್ರದಿಂದ 'ಕನಕ ಗಂಗೋತ್ರಿ'

Update: 2019-10-30 18:25 IST

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ 'ಕನಕ ಜಯಂತಿ' ಪ್ರಯುಕ್ತ 2019 ನವೆಂಬರ್  13 ಬುಧವಾರ ಪೂರ್ವಾಹ್ನ 11.00ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಹಳೆಯ ಸೆನೆಟ್ ಸಭಾಂಗಣದಲ್ಲಿ 'ಕನಕ ಗಂಗೋತ್ರಿ' ಕನಕದಾಸರ ಕೀರ್ತನ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

'ಸಾಮುದಾಯಿಕ ಪಾಲ್ಗೊಳ್ಳುವಿಕೆ'ಯ ಆಶಯದ ಈ ಕಾರ್ಯಕ್ರಮವನ್ನು  ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕನಕನ ಕಾವ್ಯಭಾಷೆ ಎಂಬ ವಿಷಯದ ಕುರಿತು ಕರ್ನಾಟಕ ಸರಕಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಇವರು ವಿಶೇಷೋಪನ್ಯಾಸವನ್ನು ನೀಡಲಿರುವರು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಎಸ್‍ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಪ್ರೊ. ಕೆ. ಅಭಯ್ ಕುಮಾರ್ ಭಾಗವಹಿಸಲಿರುವರು. 

ಅದೇ ದಿನ ಸಂಜೆ 5 ರಿಂದ ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ಪು.ತಿ.ನ ರಚಿಸಿದ ಶ್ವೇತಾ ಅರೆಹೊಳೆ ಪ್ರತಿಷ್ಠಾನ ನಿರ್ದೇಶನದ 'ಗೋಕುಲ ನಿರ್ಗಮನ' ಎಂಬ ನೃತ್ಯ ನಾಟಕ ಪ್ರದರ್ಶನವು ನಡೆಯಲಿರುವುದು ಎಂದು ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕರಾದ ಡಾ. ಧನಂಜಯ ಕುಂಬ್ಳೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನಕ ಗಾಯನ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ, ಸಂಯೋಜಿತ ಮತ್ತು ಸ್ವಾಯತ್ತ ಸ್ನಾತಕೋತ್ತರ ಪದವಿ ಕಾಲೇಜುಗಳು ಸಹಿತ, ಸ್ವಾಯತ್ತ ವಿಶ್ವವಿದ್ಯಾನಿಲಯಗಳು,  ಕಣ್ಣೂರು ವಿಶ್ವವಿದ್ಯಾನಿಲಯ ಹಾಗೂ ದಕ್ಷಿಣಕನ್ನಡ, ಉಡುಪಿ, ಕೊಡಗು ಜಿಲ್ಲಾ ವ್ಯಾಪ್ತಿಯ ರಾಜೀವ್ ಗಾಂಧಿ ವೈದ್ಯಕೀಯ ಶಿಕ್ಷಣ, ವಿಶ್ವೇಶ್ವರಯ್ಯ ತಾಂತ್ರಿಕ ಶಿಕ್ಷಣ ವಿಶ್ವವಿದ್ಯಾನಿಲಯಗಳ ಸ್ನಾತಕೋತ್ತರ ವಿಭಾಗಗಳ ವಿದ್ಯಾರ್ಥಿ, ಅಧ್ಯಾಪಕ ಮತ್ತು ಸಿಬ್ಬಂದಿವರ್ಗದವರು ಪಾಲ್ಗೊಳ್ಳಬಹುದಾಗಿದೆ. ಆಸಕ್ತರು ನವೆಂಬರ್-12ರ ಒಳಗಾಗಿ ತಮ್ಮ ಹೆಸರನ್ನು (0824) 2284360 -ಸಂಶೋಧನ ಕೇಂದ್ರ 9591480138 (ಆನಂದ ಎಂ-ಸಂಶೋಧನ ಸಹಾಯಕರು)ಈ ಸಂಖ್ಯೆಯ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಪ್ರತೀ ವಿಭಾಗದಲ್ಲಿ ಆಯ್ಕೆಗೊಂಡ ಇಬ್ಬರಿಗೆ ರೂ. 3,000/- ನಗದು ಮತ್ತು ಕನಕ ಗಾಯನ ಪುರಸ್ಕಾರವನ್ನು 'ಕನಕ ಸ್ಮೃತಿ' ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News