ಸಿಎಂ ರಾಜಕೀಯ ಸಲಹೆಗಾರರಾಗಿ ಪತ್ರಕರ್ತ ಮರಮಕಲ್ ನೇಮಕ
Update: 2019-10-30 19:20 IST
ಬೆಂಗಳೂರು, ಅ. 30: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ರಾಜಕೀಯ ಸಲಹೆಗಾರರನ್ನಾಗಿ ಪತ್ರಕರ್ತ ಎಂ.ಬಿ.ಮರಮಕಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಅಲ್ಲದೆ, ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಆರ್.ಎಸ್. ಶಿವಕುಮಾರ್ ಅವರು ಬುಧವಾರ ಅಧಿಕೃತ ಆದೇಶ ಹೊರಡಿಸಿದ್ದಾರೆ.